ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ವಜಾಗೊಳಿಸಿದೆ.

ರೇಣುಕಾಸ್ವಾಮಿ ಹತ್ಯೆ ಆರೋಪಿ ಎ.1 ಪವಿತ್ರಾ ಗೌಡ ಹಾಗೂ ಎ7 ಆರೋಪಿ ಅನುಕುಮಾರ್ ಇಬ್ಬರೂ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ವಜಾಗೊಳಿಸಿದೆ.

ಇನ್ನು ಮೊನ್ನೆ ಪವಿತ್ರ ಗೌಡ ಪರವಾಗಿ ವಾದ ಮಂಡಿಸಿದ ವಕೀಲ ಸೆಬಾಸ್ಟೀನ್ ಪವಿತ್ರ ಗೌಡ ಅವರು ಪ್ರಕರಣದಲ್ಲಿ ಒಬ್ಬರೇ ಮಹಿಳೆ ಹಾಗೂ ಅವರ ಆರೋಗ್ಯದ ದೃಷ್ಟಿಯಿಂದ ಜಾಮೀನು ನೀಡಬೇಕು ಎಂದು ವಾದ ಮಂಡಿಸಿದ್ದರು.ಆದರೆ ಇದೀಗ ಅವರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
