ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಉಪನ್ಯಾಸಕ ಅತ್ಯಾಚಾರವೆಸಗಿರುವ ಘಟನೆ ಸಾಗರದಲ್ಲಿ ನಡೆದಿದೆ. ಆರೋಪಿ ಉಪನ್ಯಾಸಕನನ್ನು ಇದೀಗ ಬಂಧಿಸಲಾಗಿದೆ.

ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕ ಪುನೀತ್ ಬಂಧಿತ ಆರೋಪಿ.ಅರ್ಥವಾಗದ ವಿಷಯದ ಬಗ್ಗೆ ಅರ್ಥ ಮಾಡಿಸಿಕೊಡ್ತೇನೆ ಅಂತೇಳಿ ವಿದ್ಯಾರ್ಥಿನಿ ಜೊತೆ ಸ್ನೇಹ ಬೆಳೆಸಿದ ಉಪನ್ಯಾಸಕ ನಂತರ ಮದುವೆಯಾಗುವುದಾಗಿ ನಂಬಿಸಿದ್ದ. ತದನಂತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.ಅತ್ಯಾಚಾರ ಕುರಿತು ಶಿವಮೊಗ್ಗ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಉಪನ್ಯಾಸಕ ಪುನೀತ್ ನನ್ನು ಪೊಲೀಸರು ಬಂಧಿಸಿದ್ದಾರೆ.
