ಬೆಂಗಳೂರು : ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ಮುಕ್ತಾಯವಾಗಿದ್ದು, ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣ ಸಂಬಂಧ ಸುದೀರ್ಘ ವಾದ-ಪ್ರತಿವಾದ ನಡೆಯಿತು. ಗುರುವಾರ ಎಲ್ಲರ ವಾದ ಮುಕ್ತಾಯವಾಗಬೇಕೆಂದು ನ್ಯಾಯಾಧೀಶರು ಮೊದಲೇ ಸೂಚಿಸಿದ್ದರು. ಅದರಂತೆ ಸಂಜೆ 6.20ರವೆಗೂ ಎರಡೂ ಕಡೆಯ ವಕೀಲರು ತಮ್ಮ ವಾದ ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿದ ಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಅಂತಿಮ ಆದೇಶದವರೆಗೆ ಮಧ್ಯಂತರ ಆದೇಶವನ್ನು ಕಾಯ್ದಿರಿಸಿದೆ.



