ನವದೆಹಲಿ : ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಡೌನ್ಲೋಡ್ ಶಿಕ್ಷಾರ್ಹ ಅಪರಾಧ ಅಂತ ಸರ್ವೋಚ್ಛ ನ್ಯಾಯಾಲಯ ಹೇಳಿದೆ.
ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಡೌನ್ಲೋಡ್ ಮಾಡಿಟ್ಟುಕೊಳ್ಳುವುದು ಪೋಕ್ಸೊ ಕಾಯ್ದೆ ಅಡಿ ಅಪರಾಧವಲ್ಲ ಅಂತ ಈ ಹಿಂದೆ ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿತ್ತು. ಅದನ್ನು ಬದಿಗೊತ್ತಿ ಸುಪ್ರೀಂ ಕೋರ್ಟ್ ಈ ಮಹತ್ವದ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಮೊಬೈಲ್ ಫೋನ್ನಲ್ಲಿ ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋ ಡೌನ್ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವ ಸಂದರ್ಭ ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ಕೋರ್ಟ್ ಮಕ್ಕಳ ಅಶ್ಲೀಲತೆಯ ವಿಚಾರಗಳನ್ನು ತಯಾರಿಸುವುದು, ಹಂಚಿಕೊಳ್ಳುವುದು, ಡೌನ್ಲೋಡ್ ಮಾಡುವುದು ಅಪರಾಧವೆಂದು ತೀರ್ಪಿತ್ತಿದೆ.
