Wednesday, July 1, 2026
Homeಜಿಲ್ಲಾಸುದ್ದಿಮುಡಾ ಕೇಸ್‌ - ಹೈಕೋರ್ಟಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ - ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದು...

ಮುಡಾ ಕೇಸ್‌ – ಹೈಕೋರ್ಟಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ – ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದು ಹೀಗೆ…

Telegram Group
Join Now

ಬೆಂಗಳೂರು : ಮುಡಾ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆಯಾದ ಬೆಳವಣಿಗೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಮೇಲೆ ಬಿಜೆಪಿ ರಾಜಕೀಯ ಷಡ್ಯಂತ್ರ ಮಾಡುತ್ತಿದೆ. ಸಿದ್ದರಾಮಯ್ಯ ಮಾತ್ರವಲ್ಲದೆ ಅವರ ಕುಟುಂಬದ ಮೇಲೂ ಷಡ್ಯಂತ್ರ ನಡೆದಿದೆ. ಅವರು ಯಾವುದೇ ತಪ್ಪು ಮಾಡಿಲ್ಲ. ಆರೋಪ ಮುಕ್ತರಾಗಿ ಹೊರಬರುತ್ತಾರೆ ಎಂದರು.


ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಸಿದ್ದರಾಮಯ್ಯ ಅವರು ಕೊಟ್ಟ ಕಾರ್ಯಕ್ರಮಗಳನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳುವುದಕ್ಕಾಗುತ್ತಿಲ್ಲ. ಈ ಹಿಂದೆ ಬಿಜೆಪಿ ನನ್ನ ವಿರುದ್ಧವೂ ಷಡ್ಯಂತ್ರ ಮಾಡಿತ್ತು. ಆದರೆ ದೇವರ ಕೃಪೆಯಿಂದ ನಾನು ಅದರಿಂದ ಹೊರಬಂದೆ. ಸದ್ಯ ಸಿಎಂ ಸಿದ್ದರಾಮಯ್ಯ ಜತೆಗೆ ನಾವು ಇದ್ದೇವೆ ಅಂತ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments