Wednesday, July 1, 2026
Homeಜಿಲ್ಲಾಸುದ್ದಿಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯಗೆ ಮುಖಭಂಗ - ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ - ಹೆಚ್.ಡಿ. ಕುಮಾರಸ್ವಾಮಿ ಅಚ್ಚರಿಯ...

ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯಗೆ ಮುಖಭಂಗ – ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ – ಹೆಚ್.ಡಿ. ಕುಮಾರಸ್ವಾಮಿ ಅಚ್ಚರಿಯ ನಡೆ..!

Telegram Group
Join Now

ಮಂಡ್ಯ : ಸಿಎಂ ಪ್ರಾಸಿಕ್ಯೂಷನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಅಂತ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಆದಿಚುಂಚನಗಿರಿಯಲ್ಲಿ ಪ್ರತಿಕ್ರಿಯಿಸಿದ ಅವರು, ನನ್ನಿಂದ ಯಾವುದೇ ತೀರ್ಮಾನ ಆಗದೇ ಇದ್ರು, ನನ್ನ ಆರೋಪಿ ಮಾಡ್ತಾ ಇದ್ದಾರೆ. ನನ್ನ ಮೇಲಿನ ಆರೋಪ ಎಲ್ಲಾ ಮುಗಿಯಲಿ. ಆ ನಂತರ ಎಲ್ಲದಕ್ಕೂ ನಾನು ಪ್ರತಿಕ್ರಿಯಿಸುತ್ತೇನೆ ಅಂತ ಹೇಳಿದರು.
ಮೈಸೂರು ಪಾದಯಾತ್ರೆಗೆ ನಾನು‌ ಹೋಗಿದ್ದೆ. ಪಾದಯಾತ್ರೆಯಲ್ಲಿ ನಾನು ಜನರನ್ನು ಜಾಗರೂಕರನ್ನಾಗಿ ಮಾಡುವ ಕೆಲಸ ಮಾಡಿದ್ದೇನೆ. ಸಿಎಂ ಬಗ್ಗೆ ನಾನೇನು ಮಾತಾಡಿಲ್ಲ. ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯವನ್ನೂ ಮಾಡಿಲ್ಲ. ಇರುವ ಪರಿಸ್ಥಿತಿಯನ್ನು ಜನರಿಗೆ ಹೇಳಿದ್ದೇನೆ. ದೇಶದ ಕಾನೂನಿನಲ್ಲಿ ರಕ್ಷಣೆ ಕೊಡಲು ಸಂವಿಧಾನದಲ್ಲಿ ಅವಕಾಶ ಇದೆ. ಕಾನೂನು ಬಾಹಿರ ಚಟುವಟಿಕೆ ಮಾಡಿದ್ರೆ, ಏನು ತೀರ್ಪು ಬೇಕು ಅದು ಕೊಡ್ತಾರೆ ಎಂದರು.

ಕಾನೂನಿನ ಒಳಗೆ ಇದ್ದರೆ ಏನು ಬೇಕಾದ್ರು ಆಗಬಹುದು. ನಾನು ಸಿದ್ದರಾಮಯ್ಯ ಅವರಿಗೆ ಏನೂ ಹೇಳಲ್ಲ. ನನ್ನ ಅಭಿಪ್ರಾಯ ನಾನು ಹೇಳಲ್ಲ. ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಅನ್ನುವುದು ಕ್ಲಿಯರ್ ಆಗಬೇಕು. ಗ್ರೇಟ್ ಪಾಲಿಟಿಷಿಯನ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ಅದೆಲ್ಲ ಕ್ಲಿಯರ್ ಆದ ಬಳಿಕ ಮಾತಾಡ್ತೀನಿ. ಸಿಎಂ ನೈತಿಕ ಹೊಣೆ ಹೊರಲಿಲ್ಲ ಅಂದ್ರೆ ನಾನು‌ ಹೇಳೋಕೆ ಆಗುತ್ತಾ. ನನ್ನ ಇಕ್ಕಟ್ಟಿಗೆ ಸಿಲುಕಿಸಲು ಹೋಗಿದ್ದಾರೆ. ನಾನು ಹೆದರುವವನಲ್ಲ. ಕಾನೂನಿನ ವ್ಯಾಪ್ತಿಯಲ್ಲಿ ಹೋರಾಟ ಮಾಡುವವನು ನಾನು ಎಂದು ತಿರುಗೇಟು ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments