Friday, March 27, 2026
Homebig breakingಶರಣಾದ ನಕ್ಸಲರಿಗೆ ನ್ಯಾಯಾಂಗ ಬಂಧನ - ಬಿಗಿ ಭದ್ರತೆಯೊಂದಿಗೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್..!‌

ಶರಣಾದ ನಕ್ಸಲರಿಗೆ ನ್ಯಾಯಾಂಗ ಬಂಧನ – ಬಿಗಿ ಭದ್ರತೆಯೊಂದಿಗೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್..!‌

ಬೆಂಗಳೂರು : ಶಸ್ತ್ರಾಸ್ತ್ರ ತ್ಯಜಿಸಿ ಸರ್ಕಾರದ ಮುಂದೆ ಶರಣಾದ 6 ಮಂದಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆಯೊಂದಿಗೆ ಶುಕ್ರವಾರ ಮುಂಜಾನೆ ಜೈಲಿಗೆ ಕಳುಹಿಸಲಾಯಿತು.
ಆರು ಮಂದಿಯನ್ನು ಜೈಲಿನ ಹೈ ಸೆಕ್ಯೂರಿಟಿ ಬ್ಯಾರಕ್‌ಗೆ ಶಿಫ್ಟ್‌ ಮಾಡಲಾಗಿದೆ. ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯುವ ಸಂದರ್ಭ 3 KSRP, 5ಕ್ಕೂ ಹೆಚ್ಚು ವಾಹನಗಳ ಹೈ ಸೆಕ್ಯೂರಿಟಿ ವ್ಯವಸ್ಥೆ ಮಾಡಲಾಗಿತ್ತು.
ಗುರುವಾರ ಮಧ್ಯಾಹ್ನ ಶರಣಾಗತ ನಕ್ಸಲರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. 6 ಮಂದಿಗೂ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!