Thursday, July 2, 2026
Homeಆರೋಗ್ಯಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಹೋರಾಟ - ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ -...

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಹೋರಾಟ – ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ – ಅಹೋರಾತ್ರಿ ಹೋರಾಟ ಅಂತ್ಯ..!

Telegram Group
Join Now

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಲ್ಕು ದಿನಗಳಿಂದ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರು. ಈ ನಡುವೆ ಪ್ರತಿಭಟನಾಕಾರರ ಜೊತೆಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.
ಆಶಾ ಕಾರ್ಯಕರ್ತೆಯರ ಸಂಘಟನೆ ಮುಖಂಡರ ಜೊತೆ ಶುಕ್ರವಾರ ಸಿದ್ದರಾಮಯ್ಯ ಸಂಧಾನ ಸಭೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು 15,000 ಮಾಸಿಕ ಗೌರವಧನ ನೀಡಬೇಕು. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ರೂಪಾಯಿ ಗೌರವಧನವನ್ನು ಹೆಚ್ಚಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ವಿವಿಧೆಡೆಯ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ಕೈಗೊಂಡಿದ್ದರು. ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುವ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಸಂಘಟನೆ ಮುಷ್ಕರ ಹಿಂಪಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments