Thursday, July 2, 2026
Homeಕ್ರೈಮ್ನಕ್ಸಲರ ಶರಣಾಗತಿ - ವಿಧಾನದ ಸಮಗ್ರತೆ ಬಗ್ಗೆಯೇ ಸಂಶಯ ಮೂಡುತ್ತಿದೆ - ಕೆ. ಅಣ್ಣಾಮಲೈ

ನಕ್ಸಲರ ಶರಣಾಗತಿ – ವಿಧಾನದ ಸಮಗ್ರತೆ ಬಗ್ಗೆಯೇ ಸಂಶಯ ಮೂಡುತ್ತಿದೆ – ಕೆ. ಅಣ್ಣಾಮಲೈ

Telegram Group
Join Now

ಉಡುಪಿ : ಕರ್ನಾಟಕದಲ್ಲಿ ನಕ್ಸಲ್‌ ಎನ್‌ಕೌಂಟರ್ ಮತ್ತು ಶರಣಾಗತಿ ಪ್ರಕ್ರಿಯೆಗಳನ್ನು ನೋಡಿದರೆ ಎರಡು ವಿಚಾರದಲ್ಲಿ ಅನೇಕ ಸಂಶಯಗಳಿವೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ, ಎಸ್ಪಿ ಸಮ್ಮುಖದಲ್ಲಿ ಶರಣಾಗತಿ ಆಗುವುದು ಕ್ರಮ. ಆದರೆ ಮುಖ್ಯಮಂತ್ರಿಗಳ ಉಸ್ತುವಾರಿಯಲ್ಲಿಯೇ ಶರಣಾಗತಿಯಾಗಿರುವುದು, ಶರಣಾಗತಿ ವಿಧಾನದ ಸಮಗ್ರತೆ ಬಗ್ಗೆ ಸಂಶಯ ಮೂಡುತ್ತದೆ. ಸರ್ಕಾರವೇ ನಕ್ಸಲರಿಗೆ ಸುಲಭವಾಗಿ ವ್ಯವಸ್ಥೆ ಮಾಡಿಕೊಟ್ಟಂತೆ ಕಾಣುತ್ತಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ಬಗ್ಗೆ ಸ್ಥಳೀಯರಿಗೆ ಸಂಶಯಗಳಿವೆ. ಈಗ ಶರಣಾದವರು ಕಾಡಿನ ಯಾವುದೋ ಒಂದು ಮೂಲೆಯಲ್ಲಿ ಶಸ್ತ್ರಾಸ್ರಗಳನ್ನು ತೋರಿಸಿದ್ದಾರೆ. ಈ ಬಗ್ಗೆ ಜನರಿಗೆ ನಂಬಿಕೆ ಬರುತ್ತಿಲ್ಲ, ಎಲ್ಲವೂ ಸಂಶಯಾಸ್ಪದವಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments