Thursday, July 2, 2026
Homeಕ್ರೈಮ್ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ - ಶ್ವಾನ ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಕಾರು

ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ – ಶ್ವಾನ ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಕಾರು

Telegram Group
Join Now

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಬಳಿ ಅಪಘಾತವಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿಯಲ್ಲಿ ತೆರಳುತ್ತಿದ್ದಾಗ ಶ್ವಾನವೊಂದು ಅಡ್ಡ ಬಂದಿದೆ ಎನ್ನಲಾಗಿದೆ. ಇದನ್ನು ತಪ್ಪಿಸಲು ಮುಂದಾದಾಗ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್, ಸಹೋದರ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ ಆರು ಗಂಟೆ ಸಮಯದಲ್ಲಿ ಅಪಘಾತವಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಾಖಲಾಗಿದ್ದಾರೆ. ಸಿಎಲ್‌ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್​ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments