Thursday, July 2, 2026
Homeಕ್ರೈಮ್ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣ- ಬಂಧಿತ ಆರೋಪಿ ಮಾನಸಿಕ ಅಸ್ವಸ್ಥ -‌ ಗೃಹಸಚಿವ ಜಿ. ಪರಮೇಶ್ವರ್

ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣ- ಬಂಧಿತ ಆರೋಪಿ ಮಾನಸಿಕ ಅಸ್ವಸ್ಥ -‌ ಗೃಹಸಚಿವ ಜಿ. ಪರಮೇಶ್ವರ್

Telegram Group
Join Now

ಬೆಂಗಳೂರು : ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣದಲ್ಲಿ ಸದ್ಯ ಬಂಧಿತನಾಗಿರುವ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ.

ಪ್ರಕರಣದ ತನಿಖೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್‌, ಘಟನೆಯ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ. ಯಾರದ್ದೇ ಕೈವಾಡವಿದ್ದರೂ ಮುಲಾಜಿಲ್ಲದೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಬಿಹಾರ ಮೂಲದ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದು, ಹಾಲು ಕುಡಿದು ಹಸುವಿನ ಕೆಚ್ಚಲು ಕತ್ತರಿಸಿದ್ದಾನೆ. ಈ ಕೃತ್ಯದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬುದನ್ನು ಆರೋಪಿಯಿಂದಲೇ ಬಾಯಿ ಬಿಡಿಸಲಾಗುವುದು. ಪ್ರಕರಣದಲ್ಲಿ ಅಮಾಯಕನನ್ನು ಬಂಧಿಸಲಾಗಿದೆ ಎಂದು ಬಿಜೆಪಿಯವರು ಆರೋಪಿಸುತ್ತಿರುವುದು ಅಸಮರ್ಥನೀಯ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments