Friday, October 16, 2026
Homeಜಿಲ್ಲಾಸುದ್ದಿBJPಯಲ್ಲಿ ಬಣ ಬಡಿದಾಟದ ಮಧ್ಯೆ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾದ ಕಾರ್ಕಳ ಶಾಸಕ ಸುನೀಲ್‌...

BJPಯಲ್ಲಿ ಬಣ ಬಡಿದಾಟದ ಮಧ್ಯೆ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾದ ಕಾರ್ಕಳ ಶಾಸಕ ಸುನೀಲ್‌ ಕುಮಾರ್‌

Telegram Group
Join Now

ಬೆಂಗಳೂರು : ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಸರತ್ತು ಜೋರಾಗಿದ್ರೆ, ಇತ್ತ ಬಿಜೆಪಿಯಲ್ಲಿ ಬಣ ಬಡಿದಾಟದ ಅಬ್ಬರ ಹೆಚ್ಚಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಬಣಗಳ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಈ ಮಧ್ಯೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿರುವುದು ಅಚ್ಚರಿ ಮೂಡಿದಸಿದೆ. ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್​ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ತಮ್ಮ ಆಪ್ತ ನಾಯಕರುಗಳಿಗೆ ಪಕ್ಷದ ಜವಾಬ್ದಾರಿಗಳನ್ನು ನೀಡಿದ್ದರು. ಆ ಪೈಕಿ ಸುನೀಲ್‌ ಕುಮಾರ್‌ ಕೂಡಾ ಒಬ್ಬರು. ಸುನಿಲ್​ ಕುಮಾರ್​ಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ್ದರು. ಆದ್ರೆ, ಇದೀಗ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿರುವುದು ಅಚ್ಚರಿ ಮೂಡಿಸಿದೆ. ಹೈಕಮಾಂಡ್ ಮಾತ್ರ ಸುನಿಲ್ ಕುಮಾರ್ ಅವರ ಮನವಿ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!