ವಿಜಯಪುರ : ಮೂವರು ಕಾರ್ಮಿಕರ ಮೇಲೆ ಮಾಲೀಕನೊಬ್ಬ ಮಾರಣಾಂತಿಕ ಹಲ್ಲೆ ಮಾಡಿರುವ ಅಮಾನುಷ ಘಟನೆ ವಿಜಯಪುರದ ಗಾಂಧಿನಗರದಲ್ಲಿ ನಡೆದಿದೆ. ಸ್ಟಾರ್ ಚೌಕ್ ಬಳಿ ಇಟ್ಟಿಗೆ ಭಟ್ಟಿಯಲ್ಲಿ ಘಟನೆ ನಡೆದಿದ್ದು, ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ್ ಎಂಬ ಮೂವರು ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಕ್ರೌರ್ಯ ಮೆರೆದಿದ್ದಾನೆ.
ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಖೇಮು ರಾಠೋಡ್ ತನ್ನ ಸಹಚರರನ್ನು ಬಳಸಿ ಪೈಪ್ಗಳಿಂದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದವರಾದ ಮೂವರು ಕಾರ್ಮಿಕರು ಸಂಕ್ರಾಂತಿ ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಊರಿಗೆ ಹೋಗಿ ವಾಪಸ್ ಬರಲು ವಿಳಂಬ ಮಾಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಕಾರ್ಮಿಕರು ಇನ್ನು ಮುಂದೆ ಕೆಲಸಕ್ಕೆ ಬರೋದಿಲ್ಲ ಅಮತ ಹೇಳಿದ ಕಾರಣಕ್ಕಾಗಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಕಾರ್ಮಿಕರು ಎಷ್ಟೇ ಬೇಡಿಕೊಂಡರೂ ಬಿಡದೆ ಹಲ್ಲೆ ಮಾಡಿದ್ದಾನೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಲ್ಲಿದ್ದ ವ್ಯಕ್ತಿಯೊಬ್ಬರು ಈ ಅಮಾನುಷ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಈ ಕ್ರೌರ್ಯದ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮಾಲೀಕನ ವಿರುದ್ಧ ಕ್ರಮಕ್ಕೆ ಜನ ಆಗ್ರಹಿಸುತ್ತಿದ್ದಾರೆ.
ಕಾರ್ಮಿಕರ ಮೇಲೆ ಕ್ರೌರ್ಯ ಮೆರೆದ ಇಟ್ಟಿಗೆ ಭಟ್ಟಿ ಮಾಲೀಕ – ಅಮಾನುಷ ಕೃತ್ಯದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ..!
RELATED ARTICLES
