Wednesday, March 25, 2026
Homebig breakingಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣ - ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲ : ಶಾಸಕ ಭರತ್‌...

ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣ – ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲ : ಶಾಸಕ ಭರತ್‌ ಶೆಟ್ಟಿ ಗಂಭೀರ ಆರೋಪ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಭರತ್‌ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯದ ಬೆಂಬಲ ನೀಡಲಾಗ್ತಿದೆ ಅಂತ ಅವರು ಆರೋಪಿಸಿದ್ದಾರೆ.
ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕುವ ಪ್ರಯತ್ನ ಪ್ರಕರಣ ನಡೆದಾಗಿನಿಂದಲೂ ನಡೆಯುತ್ತಿದೆ ಶೇ.100 ರಷ್ಟು ಸ್ಥಳೀಯರು ಈ ಪ್ರಕರದಲ್ಲಿ ಭಾಗಿಯಾಗಿದ್ದಾರೆ. ಸದ್ಯ ಪೊಲೀಸರು ದರೋಡೆಕೋರರನ್ನು ಬಂಧಿಸಿದ್ದಾರೆ. ಆದ್ರೆ ಈ ಕುಕೃತ್ಯಕ್ಕೆ ಬೆಂಬಲ ನೀಡಿದವರನ್ನು ರಕ್ಷಿಸುವ ಕಾರ್ಯವಾಗುತ್ತಿದೆ ಎಂದಿದ್ದಾರೆ. ಬೇರೆ ಪ್ರಕರಣಗಳಲ್ಲಿ ಶಾಮೀಲಾದವರು ಕೂಡಾ ಈ ದರೋಡೆ ಪ್ರಕರಣದಲ್ಲಿದ್ದಾರೆ ಎಂದು ಡಾ. ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಕೋಟೆಕಾರು ಬ್ಯಾಂಕ್ ದರೋಡೆ ಸಂಬಂಧ ಕಣ್ಣನ್ ಮಣಿ, ಮುರುಗನ್ ಡಿ ದೇವರ್, ರಾಜೇಂದ್ರನ್​ನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಫಿಯೇಟ್ ಕಾರು, 2 ಪಿಸ್ತೂಲ್, 4 ಜೀವಂತ ಗುಂಡು, 3 ಲಕ್ಷ ನಗದು ಮತ್ತು 2 ಕೇಜಿ ಚಿನ್ನ ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.
ಇನ್ನು ಈ ಗ್ಯಾಂಗ್‌ ಈ ಹಿಂದೆಯೂ ಇಂಥ ಅನೇಕ ಕುಕೃತ್ಯಗಳಲ್ಲಿ ಪಾಲ್ಗೊಂಡಿದೆ ಅನ್ನೋದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರ ವಿಚಾರಣೆ ವೇಳೆ ಇನ್ನಷ್ಟು ವಿಚಾರಗಳು ಹೊರಬರುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!