Monday, August 4, 2025
!-- afp header code starts here -->
Homebig breaking'ಪೈಲ್ವಾನ್‌ʼಗೆ ಬಂತು ಅತ್ಯುತ್ತಮ ನಟ ಪ್ರಶಸ್ತಿ - ಅವಾರ್ಡ್‌ ಬೇರೆಯವರಿಗೆ ಕೊಡಿ ಎಂದಿದ್ಯಾಕೆ ಕಿಚ್ಚ ಸುದೀಪ್..?‌

‘ಪೈಲ್ವಾನ್‌ʼಗೆ ಬಂತು ಅತ್ಯುತ್ತಮ ನಟ ಪ್ರಶಸ್ತಿ – ಅವಾರ್ಡ್‌ ಬೇರೆಯವರಿಗೆ ಕೊಡಿ ಎಂದಿದ್ಯಾಕೆ ಕಿಚ್ಚ ಸುದೀಪ್..?‌

ಬೆಂಗಳೂರು : 2019ನೇ ಸಾಲಿನ ಕನ್ನಡ ಚಿತ್ರಗಳ ರಾಜ್ಯ ಪ್ರಶಸ್ತಿ ಪ್ರಕಟವಾಗಿದೆ. ಅತ್ಯುತ್ತಮ ನಟ ಪ್ರಶಸ್ತಿಗೆ ಕಿಚ್ಚ ಸುದೀಪ್‌ ಆಯ್ಕೆಯಾಗಿದ್ದಾರೆ. ‘ಪೈಲ್ವಾನ್’ ಸಿನಿಮಾದಲ್ಲಿನ ನಟನೆಗಾಗಿ ಈ ಪ್ರಶಸ್ತಿ ಬಂದಿದೆ. ಆದರೆ ಈ ಪ್ರಶಸ್ತಿಯನ್ನು ನಾನು ಸ್ವೀಕರಿಸುವುದಿಲ್ಲ ಎಂದಿದ್ದಾರೆ. ತನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ಸರ್ಕಾರ ಹಾಗೂ ಜ್ಯೂರಿಗಳಿಗೆ ಧನ್ಯವಾದ ಅರ್ಪಿಸಿರುವ ಅವರು, ತಮ್ಮ ಬದಲು ಬೇರೆ ಕಲಾವಿದರಿಗೆ ಈ ಪ್ರಶಸ್ತಿ ಸಲ್ಲಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಅವರ ಪತ್ರದ ಸಾರಾಂಶ ಇಂತಿದೆ…
‘ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ ಮತ್ತು ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಆದಾಗ್ಯೂ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಲು ನಾನು ನಿರ್ಧರಿಸಿದ್ದೇನೆ. ಅದಕ್ಕೆ ವಿವಿಧ ವೈಯಕ್ತಿಕ ಕಾರಣಗಳಿವೆ.’
‘ಈ ಕಲೆಗಾಗಿ ತಮ್ಮ ಹೃದಯವನ್ನು ಅರ್ಪಿಸಿದ ಅನೇಕ ಸಮರ್ಥ ನಟರು ಇದ್ದಾರೆ. ನನಗಿಂತಲೂ ಹೆಚ್ಚಾಗಿ ಅವರಿಗೆ ಈ ಗೌರವ ಸಲ್ಲಬೇಕು. ಅವರಲ್ಲಿ ಒಬ್ಬರು ಈ ಗೌರವ ಪಡೆದರೆ ನನಗೆ ಹೆಚ್ಚು ಖುಷಿ ಆಗುತ್ತದೆ. ಜನರನ್ನು ರಂಜಿಸಬೇಕು ಎಂಬ ನನ್ನ ಕೆಲಸದಲ್ಲಿ ಪ್ರಶಸ್ತಿಗಳ ನಿರೀಕ್ಷೆ ಇಲ್ಲ. ಜ್ಯೂರಿಗಳು ನನ್ನನ್ನು ಗುರುತಿಸಿರುವುದು ನನಗೆ ಇನ್ನಷ್ಟು ಉತ್ತೇಜನ ನೀಡಿದೆ.’
‘ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಜ್ಯೂರಿಗಳಿಗೆ ನಾನು ಚಿರಋಣಿ. ಈ ಮನ್ನಣೆಯೇ ನಿಜವಾದ ಪ್ರಶಸ್ತಿ. ನನ್ನ ನಿರ್ಧಾರದಿಂದ ನಿರಾಸೆ ಆಗಿದ್ದರೆ ಜ್ಯೂರಿಗಳಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಕ್ಷಮೆ ಕೇಳುತ್ತೇನೆ. ನನ್ನ ನಿರ್ಧಾರವನ್ನು ನೀವು ಗೌರವಿಸುತ್ತೀರಿ ಮತ್ತು ನನ್ನನ್ನು ಬೆಂಬಲಿಸುತ್ತೀರಿ ಎಂಬ ನಂಬಿಕೆ ನನಗೆ ಇದೆ. ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ತೀರ್ಪುಗಾರರ ಗೌರವಾನ್ವಿತ ಸದಸ್ಯರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ.’
ಇಂತಿ.. ಕಿಚ್ಚ ಸುದೀಪ.

https://x.com/KicchaSudeep/status/1882379919986184508?ref_src=twsrc%5Etfw%7Ctwcamp%5Etweetembed%7Ctwterm%5E1882379919986184508%7Ctwgr%5E3c9aac54190f9c92178218b54cb4fcada3fa1b85%7Ctwcon%5Es1_&ref_url=https%3A%2F%2Ftv9kannada.com%2Fentertainment%2Fsandalwood%2Fkichcha-sudeep-rejects-best-actor-state-award-for-pailwaan-movie-entertainment-news-in-kannada-mdn-968249.html&mx=2

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!