ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಬೆಳಕಿಗೆ ಬಂದಿದೆ. ಥೈಲ್ಯಾಂಡ್ನಿಂದ ಯುವತಿಯನ್ನು ಕರೆತಂದು ನಗರದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ರತನ್ ಬಂಧಿತ ಆರೋಪಿ. ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿನ ಹೋಟೆಲ್ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ. ಈತನನ್ನು ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರತನ್ ಕೆಎಸ್ಆರ್ಟಿಸಿಯಲ್ಲಿ ಉದ್ಯೋಗದಲ್ಲಿದ್ದ. ಸರ್ಕಾರಿ ಕೆಲಸವನ್ನು ಬಿಟ್ಟು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಂತ ತಿಳಿದುಬಂದಿದೆ. ರತನ್ ನಡೆಸುತ್ತಿದ್ದ ವೇಶ್ಯಾವಾಟಿಕೆಗೆ ರೇವಣ್ಣ ಎಂಬಾತ ಸಾಥ್ ಕೊಡ್ತಿದ್ದನಂತೆ. ರತನ್ ಪ್ರತಿ ಗಿರಾಕಿಯಿಂದ 8-10 ಸಾವಿರ ರೂ. ತೆಗೆದುಕೊಂಡು ದಂಧೆ ನಡೆಸುತ್ತಿದ್ದ. ಈ ಬಗ್ಗೆ ನಿಖರ ಮಾಹಿತಿ ಪಡೆದ ಸರಸ್ವತಿಪುರಂ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ಹೊಟೇಲ್‌ನಿಂದ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ರತನ್ ಸೇರಿ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ.
ಸಾಂಸ್ಕೃತಿಕ ನಗರಿಯಲ್ಲಿ ಥೈಲ್ಯಾಂಡ್ ಯುವತಿಯರನ್ನು ಬಳಸಿಕೊಂಡ ಹೈಟೆಕ್ ವೇಶ್ಯಾವಾಟಿಕೆ – ಸರಸ್ವತಿಪುರಂ ಪೊಲೀಸರಿಂದ ಆರೋಪಿ ಬಂಧನ
RELATED ARTICLES