ಬೆಂಗಳೂರು : ರಾಜ್ಯದಲ್ಲಿ ಸರ್ಕಾರ ಮಾಡಿರುವ ಪಾಪದಿಂದಾಗಿ ಜನ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸರ್ಕಾರ ಸಾಲ ನೀಡದ ಕಾರಣ ಜನ ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಮೀಟರ್ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ. ಸರ್ಕಾರ ಸಾಲ ನೀಡದ ಕಾರಣ ಜನ ಮೈಕ್ರೋ ಫೈನಾನ್ಸ್ ಮೊರೆ ಹೋಗಿದ್ದಾರೆ ಎಂದರು.
ಪ್ರತಿ ಬಜೆಟ್‌ನಲ್ಲೂ ಅನುದಾನ ಶೇ.20 ರಷ್ಟು ಹೆಚ್ಚಾಗಬೇಕು. ಬಿಜೆಪಿ ಸರ್ಕಾರ ಪ್ರತಿ ಇಲಾಖೆಗೆ ನೀಡುತ್ತಿದ್ದ ಅನುದಾನಕ್ಕಿಂತ ಕಾಂಗ್ರೆಸ್ ಸರ್ಕಾರ ಕಡಿಮೆ ಅನುದಾನ ನೀಡುತ್ತಿದೆ. ಅಲ್ಲದೆ, ನಿಗಮ-ಮಂಡಳಿ ಅನುದಾನಕ್ಕೂ ಕತ್ತರಿ ಹಾಕಿದೆ. ಇಲಾಖೆ ಮತ್ತು ನಿಗಮಗಳಿಗೆ ಹಣದ ಕೊರತೆಯಾಗಿದೆ. ಈ ಹಣದಲ್ಲಿ ಜನರಿಗೆ ಸಾಲ ನೀಡಬಹುದಿತ್ತು. ಕೊರತೆಯಾದ ಹಣವನ್ನು ಸಾಲವಾಗಿ ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿವೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರ ಮಾಡಿದ ಪಾಪದಿಂದಾಗಿ ಜನತೆ ಆತ್ಮಹತ್ಯೆ – ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ..!
RELATED ARTICLES