ಹಾಸನ : ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ರೇವಂತ್ 18), ಮಂಜುನಾಥ್(೪೬) ಮೃತ ವ್ಯಕ್ತಿಗಳು.
ಟೈರ್ ಪಂಕ್ಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿ ಮೃತನಾಗಿದ್ದಾನೆ. ಬೈಕ್ ಸವಾರ ವಿದ್ಯಾರ್ಥಿ ರೇವಂತ್(18) ಸ್ಥಳದಲ್ಲೇ ಕೊನೆಯುಸಿರೆಳೆದ ಯುವಕ. ಶಾಂತಿಗ್ರಾಮ ಬಳಿಯ ರಾಷ್ಟೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ಹಾಸನದ ಸೆಂಟ್ರಲ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.
ಮತ್ತೊಂದು ಪ್ರಕರಣದಲ್ಲಿ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವು ಸಂಭವಿಸಿದೆ. ಕೌಡಳ್ಳಿ ಗ್ರಾಮದ ನಿವಾಸಿ 46 ವರ್ಷದ ಮಂಜುನಾಥ್ ಮೃತ ವ್ಯಕ್ತಿ. ಸಕಲೇಶಪುರ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಂಜುನಾಥ್ ದೇಹ ಛಿದ್ರವಾಗಿ ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಹರಡಿತ್ತು. ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ ಜಿಲ್ಲೆಯಲ್ಲಿ ಪ್ರತ್ಯೇಕ ಅಪಘಾತ – ಇಬ್ಬರು ದುರ್ಮರಣ..!
RELATED ARTICLES