ಮೈಸೂರು : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಮಹಾಕುಂಭ ಮೇಳದಲ್ಲಿ ಉತ್ತರ ಪ್ರದೇಶ ಸರ್ಕಾರ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ. ಹೀಗಿದ್ರೂ ಕಾಲ್ತುಳಿತ ಸಂಭವಿಸಿ ಭಕ್ತರ ಪ್ರಾಣ ಹಾನಿಯಾಗಿರುವುದು, ಗಾಯಗೊಂಡಿರುವುದು ದುರದೃಷ್ಟಕರ ಎಂದಿದ್ದಾರೆ. ನಾನು ಕೂಡಾ ಜನವರಿ ೧೮, ೧೯ರಂದು ಪ್ರಯಾಗ್‌ರಾಜ್‌ಗೆ ಹೋಗಿದ್ದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅಲ್ಲಿನ ಸರ್ಕಾರ ತೆಗದುಕೊಂಡಿದೆ. ಆದ್ರೆ ನಿರೀಕ್ಷೆಗೂ ಮೀರಿದ ಭಕ್ತರು ಬಂದಿದ್ದಾರೆ. ದೊಡ್ಡ ಪ್ರಮಾಣದ ಜನಸಂದಣಿ ಇದೆ ಎಂದ ಅವರು, ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ.
ಪ್ರಯಾಗ್‌ರಾಜ್‌ನಲ್ಲಿ ಕಾಲ್ತುಳಿತ ಪ್ರಕರಣ – ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಪ್ರತಿಕ್ರಿಯೆ…
RELATED ARTICLES