Monday, August 4, 2025
!-- afp header code starts here -->
Homebig breakingಪ್ರಯಾಗ್‌ರಾಜ್‌ ಮಹಾಕುಂಭ ಮೇಳ - ನನ್ನ ನಂಬಿಕೆ, ಭಕ್ತಿ ಬಗ್ಗೆ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ...

ಪ್ರಯಾಗ್‌ರಾಜ್‌ ಮಹಾಕುಂಭ ಮೇಳ – ನನ್ನ ನಂಬಿಕೆ, ಭಕ್ತಿ ಬಗ್ಗೆ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ ಎಂದ ಡಿಕೆಶಿ..!

ಬೆಂಗಳೂರು : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ಬಗ್ಗೆ ಕಾಂಗ್ರೆಸ್‌ ನಾಯಕರು ಟೀಕಿಸುತ್ತಿದ್ದಾರೆ. ಒಬ್ಬೊಬ್ಬ ನಾಯಕರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕುಂಭಮೇಳಕ್ಕೆ ತೆರಳುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿ ಲೇವಡಿ ಮಾಡುತ್ತಿದೆ.
ಇದೀಗ ಈ ಬಗ್ಗೆ ಡಿಕೆ ಶಿವಕುಮಾರ್‌ ಮಾತನಾಡಿದ್ದು, ಗಂಗೆಯಲ್ಲಿ ಮಿಂದ ತಕ್ಷಣ ಡಿಕೆ ಶಿವಕುಮಾರ್ ಅವರ ಪಾಪಗಳೆಲ್ಲ ಕಳೆದುಹೋಗುತ್ತಾ? ಎಂಬ ವಿಪಕ್ಷ ನಾಯಕ ಆರ್​. ಅಶೋಕ್ ಹೇಳಿಕೆಗೆ​ ತಿರುಗೇಟು ನೀಡಿದ್ದಾರೆ. ಕುಂಭಮೇಳಕ್ಕೆ ಹೋಗುವುದು ಬಿಡುವುದು ನನ್ನ ವೈಯಕ್ತಿಕ ವಿಚಾರ. ನನ್ನ ವೈಯಕ್ತಿಕ ನಂಬಿಕೆ, ಭಕ್ತಿ ಬಗ್ಗೆ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ. ಎಲ್ಲರಿಗೂ ಅವರದ್ದೇ ಆದ ಭಕ್ತಿ, ನಂಬಿಕೆ ಇರುತ್ತವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ನಮ್ಮ ಧರ್ಮ-ಕರ್ಮ, ನಮ್ಮ ಆಚಾರ-ವಿಚಾರ ಮತ್ತು ನಮ್ಮ ನಂಬಿಕೆ. ಗಂಗೆ, ಕಾವೇರಿ, ಕೃಷ್ಣ ಮತ್ತು ಬ್ರಹ್ಮಪುತ್ರ ನದಿಗಳು ಯಾರ ಸ್ವತ್ತೂ ಅಲ್ಲ. ಅಶೋಕ್ ಅಂತ ಯಾಕೆ ಹೆಸರು ಇಟ್ಟುಕೊಂಡಿದ್ದಾರೆ. ಅಶೋಕ್ ಬದಲು ಕಲ್ಲು ಮಣ್ಣು ಎಂದು ಹೆಸರು ಇಟ್ಟುಕೊಳ್ಳಬಹುದಲ್ಲ. ನನ್ನ ನಂಬಿಕೆ ಬಗ್ಗೆ ಮಾತಾಡುವ ಅಶೋಕ್​ ಅವರಿಗೆ ಏನೋ ಸಮಸ್ಯೆ ಇರಬೇಕು. ಮೊದಲು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲಿ. ನನ್ನ ಹೆಸರು ಹೇಳದಿದ್ರೆ ಕೆಲವರಿಗೆ ನಿದ್ದೆ ಬರೋದಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದರು. ಕುಂಭಮೇಳ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಅವರ ವಿಚಾರ ಹೇಳಿದ್ದಾರೆಂದು ಪ್ರತಿಕ್ರಿಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!