ಹಾಸನ : ಬುದ್ಧಿಮಾಂದ್ಯ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಬೇಲೂರು ತಾಲೂಕಿನ ಗ್ರಾಮವೊಂದರಲ್ಲಿ ಕೃತ್ಯ ನಡೆದಿದ್ದು, ಸಂತ್ರಸ್ತ ಬಾಲಕಿಯ ಪಕ್ಕದ ಮನೆಯ ವ್ಯಕ್ತಿಯೇ ಈ ಕೃತ್ಯವೆಸಗಿದಾತ.
ಬಾಲಕಿ ಪೋಷಕರು ಕುಟುಂಬದ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಮನೆಯಲ್ಲಿ ಬುದ್ಧಿಮಾಂದ್ಯ ಬಾಲಕಿ ಮಾತ್ರ ಇದ್ದಳು. ಇದೇ ಸಮಯಕ್ಕಾಗಿ ಕಾದು ಕುಳಿತಿದ್ದ ಕಾಮುಕ ಎರಡು ಮಕ್ಕಳ ತಂದೆ ಕೃಷ್ಣ ಎಂಬಾತ ಚಾಕೊಲೆಟ್ ಕೊಡುವ ನೆಪದಲ್ಲಿ ಬಂದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗುತ್ತಿದೆ. ಅತ್ಯಾಚಾರವಸೆಗಿದ ಬಳಿಕ ಏನೂ ಆಗಿಲ್ಲವೆಂಬಂತೆ ಕೀಚಕ ಮನೆಯಲ್ಲೇ ಇದ್ದ.
ಸಂಜೆ ವೇಳೆಗೆ ಪೋಷಕರು ಮನೆಗೆ ಬಂದಾಗ ಬಾಲಕಿ ವರ್ತನೆ ಕಂಡು ಆತಂಕಕ್ಕೊಳಗಾಗಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ವಿಷಯ ಗೊತ್ತಾಗುತ್ತಿದ್ದಂತೆ ಆರೋಪಿ ಎಸ್ಕೇಪ್ ಆಗಿದ್ದಾನೆ. ಕಿರಾತಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರವಸೆಗಿದ ಎರಡು ಮಕ್ಕಳ ತಂದೆ – ಹಾಸನದಲ್ಲೊಂದು ಹೀನ ಕೃತ್ಯ..!
RELATED ARTICLES