Friday, March 27, 2026
Homebig breakingನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ - ಇಬ್ಬರು ಕಾರ್ಮಿಕರ ದುರಂತ ಅಂತ್ಯ..!

ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ – ಇಬ್ಬರು ಕಾರ್ಮಿಕರ ದುರಂತ ಅಂತ್ಯ..!

ನೆಲಮಂಗಲ : ನಿರ್ಮಾಣ ಹಂತದ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಇಬ್ಬರು ಕಾರ್ಮಿಕರು ಧಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷನ್(23) ಮೃತ ಕಾರ್ಮಿಕರು.
ಇಂಜಿನಿಯರ್ ಸತೀಶ್​ಗೆ ಸೇರಿದ ಶಿವಾನಿ ಗ್ರೀನ್ ಲೇಔಟ್​ನಲ್ಲಿರುವ 3 ಅಂತಸ್ತಿನ ಕಟ್ಟಡದಲ್ಲಿ ಘಟನೆ ನಡೆದಿದೆ. ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ವುಡ್​ ವರ್ಕ್ಸ್ ಕೆಲಸ ಮಾಡಲಾಗುತ್ತಿತ್ತು. ಮರ ಫಾಲೀಷ್ ಮಾಡಲು ಥಿನ್ನರ್ ಬಳಕೆ ಮಾಡಲಾಗಿದೆ. ಕೆಮಿಕಲ್ ಕೂಡ ಸಮೀದಲ್ಲೇ ಶೇಖರಣೆ ಮಾಡಲಾಗಿತ್ತು. ಈ ವೇಳೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ.
ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರೆ, ನೀರಿನ ಟ್ಯಾಂಕರ್ ಮೇಲೆ ಕುಳಿತುಕೊಂಡಿದ್ದ ಕಾರ್ಮಿಕನೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!