ಧಾರವಾಡ : ಮುಡಾ ಅಕ್ರಮ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣ ತನಿಖೆ ನಡೆಸುತ್ತಿರುವ ಲೋಕಾಯುಕ್ತ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಸ್ವತಂತ್ರ ತನಿಖಾ ಸಂಸ್ಥೆ ಸಿಬಿಐಗೆ ವಹಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸುದೀರ್ಘ ವಾದ-ವಿವಾದ ಆಲಿಸಿತ್ತು. ಇಂದು ತೀರ್ಪು ಪ್ರಕಟಿಸಿದ ನ್ಯಾ. ನಾಗಪ್ರಸನ್ನ ಅವರ ಪೀಠ ಸ್ನೇಹಮಯಿ ಕೃಷ್ಣ ಅವರ ಅರ್ಜಿಯನ್ನು ವಜಾಗೊಳಿಸಿದೆ.
ಮುಡಾ ಕೇಸ್ ; ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ – ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
RELATED ARTICLES