Advertisement

Homeಇತರೆಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ - ಅಂಕಿತ ಹಾಕದೆ ಸರ್ಕಾರಕ್ಕೆ ವಾಪಸ್‌ ಕಳುಹಿಸಿದ ರಾಜ್ಯಪಾಲರು...

ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ – ಅಂಕಿತ ಹಾಕದೆ ಸರ್ಕಾರಕ್ಕೆ ವಾಪಸ್‌ ಕಳುಹಿಸಿದ ರಾಜ್ಯಪಾಲರು – ಕಾರಣವೇನು ಗೊತ್ತಾ..?

ಬೆಂಗಳೂರು : ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್​ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕದೆ ವಾಪಸ್ ಕಳುಹಿಸಿದ್ದಾರೆ.
ಸುಗ್ರೀವಾಜ್ಞೆ ಸಂಬಧ ಸರ್ಕಾರಕ್ಕೆ ಹಲವು ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ‌ ಹೇಗೆ ಹಾಕುತ್ತೀರಾ..? ಎಂದು ಪ್ರಶ್ನಿಸಿದ್ದಾರೆ.
ಸಾಲ ಪಡೆಯುವವನ ಬಳಿ ಏನೂ ದಾಖಲೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದೀರಾ. ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಪರಿಣಾಮ ಬೀರಲಿದೆ.
ಹೀಗಾಗಿ ಬಜೆಟ್ ಅಧಿವೇಶನದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಬಗ್ಗೆ ಸಾದಕ-ಬಾಧಕ ಚರ್ಚಿಸಿ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದಿರುವುದರಿಂದ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!