Saturday, September 26, 2026
Homeಕ್ರೈಮ್ಅಬ್ದುಲ್‌ ರಹಿಮಾನ್‌ ಹ*ತ್ಯೆ ಪ್ರಕರಣ; ಮೂವರು ಆರೋಪಿಗಳ ಬಂಧನ.!

ಅಬ್ದುಲ್‌ ರಹಿಮಾನ್‌ ಹ*ತ್ಯೆ ಪ್ರಕರಣ; ಮೂವರು ಆರೋಪಿಗಳ ಬಂಧನ.!

Telegram Group
Join Now

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹಿಮಾನ್ ಕೊಲೆಗೈದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದೀಪಕ್(21), ಅಮ್ಮುಂಜೆ ಗ್ರಾಮದವರಾದ ಪೃಥ್ವಿರಾಜ್(21) ಮತ್ತು ಚಿಂತನ್‌(19) ಎಂದು ತಿಳಿದು ಬಂದಿದೆ.


ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿದೆ ಎಂದು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ 191[1], 191[2], 191[3], 118[1]. 118 [2], 109, 103(3), 190 ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!