Sunday, August 16, 2026
Homeಬ್ರೇಕಿಂಗ್ ನ್ಯೂಸ್ಪಕ್ಷದ ಶಿಸ್ತನ್ನು ಯಾರೇ ಉಲ್ಲಂಘಿಸಿದರೂ ನೋಟಿಸ್ ಕೊಡ್ತೀನಿ: ಡಿ.ಕೆ.ಶಿವಕುಮಾರ್

ಪಕ್ಷದ ಶಿಸ್ತನ್ನು ಯಾರೇ ಉಲ್ಲಂಘಿಸಿದರೂ ನೋಟಿಸ್ ಕೊಡ್ತೀನಿ: ಡಿ.ಕೆ.ಶಿವಕುಮಾರ್

Telegram Group
Join Now

ಬೆಂಗಳೂರು: ಪಕ್ಷದ ಶಿಸ್ತನ್ನು ಯಾರೂ ಕೂಡ ಉಲ್ಲಂಘನೆ ಮಾಡಬಾರದು. ಯಾರೇ ಉಲ್ಲಂಘಿಸಿದರೂ ನೋಟಿಸ್ ಕೊಡ್ತೀನಿ ಎಂದು  ಶಾಸಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.

ಪಕ್ಷದಲ್ಲಿ ಶಿಸ್ತು ಮುಖ್ಯ. ನಾನು ಯಾರಿಗೂ ನನ್ನ ಹೆಸರು ಹೇಳಿ, ಸಿಎಂ ಮಾಡಿ ಅಂತ ಹೇಳಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಬೇರೆ ಯಾರೂ ಅಪಸ್ವರ ಎತ್ತಬಾರದು ಹಾಗೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ಗೆ ನೋಟಿಸ್ ಜಾರಿ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಕ್ಬಾಲ್ ಹುಸೇನ್‌ಗೂ ನೋಟಿಸ್ ಕೊಡ್ತೀನಿ, ಬೇರೆ ಅವರಿಗೂ ನೋಟಿಸ್ ಕೊಡಬೇಕಾಗುತ್ತದೆ. ಪಕ್ಷದ ಶಿಸ್ತು ಯಾರೂ ಉಲ್ಲಂಘನೆ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಶಾಸಕರಿಗೆ ಅಸಮಾಧಾನ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಂದಿನ ಚುನಾವಣೆಗೆ ಸಿದ್ಧತೆ ಮಾಡುವ ದೃಷ್ಟಿಯಿಂದ ಸುರ್ಜೇವಾಲಾ ಶಾಸಕರ ಸಭೆ ಮಾಡಿದ್ದಾರೆ. ಶಾಸಕರಿಗೆ ಎಲ್ಲೂ ಅಸಮಾಧಾನ ಇರಲಿಲ್ಲ. ಯಾರಿಗೂ ಅಸಮಾಧಾನ ಇಲ್ಲ. ಶಾಸಕರಿಗೆ ಪಕ್ಷ ಮತ್ತು ಸಂಘಟನೆ ವಿಚಾರದಲ್ಲಿ ಜವಾಬ್ದಾರಿ ನಿಗದಿ ಮಾಡುತ್ತಿದ್ದಾರೆ. ಶಾಸಕರು ಏನು ಮಾಡಬೇಕು? ನಾವೇನು ಮಾಡಬೇಕು? ಚುನಾವಣೆಗೆ ಈಗಿನಿಂದಲೇ ಹೇಗೆ ಸಿದ್ಧತೆ ಮಾಡಬೇಕು ಎಂದು ತಿಳಿಸಿದರು

ಪಕ್ಷಕ್ಕೆ ಎಲ್ಲರೂ ಕಷ್ಟಪಟ್ಟಿದ್ದಾರೆ. ನನ್ನಂತ ನೂರಾರು ಕಾರ್ಯಕರ್ತರು ಕಷ್ಟಪಟ್ಟಿದ್ದಾರೆ. ನಾನು ಒಬ್ಬನೇ ಕಷ್ಟಪಟ್ಟಿದ್ದೀನಾ? ಸಾವಿರಾರು ಜನ, ಲಕ್ಷಾಂತರ ಜನ ಕಷ್ಟಪಟ್ಟಿದ್ದಾರೆ. ಮೊದಲು ನಾವು ಅವರ ಬಗ್ಗೆ ಯೋಚನೆ ಮಾಡಬೇಕು ಎಂದು ಸಿಎಂ ಪರ ಡಿಕೆಶಿ ಬ್ಯಾಟ್‌ ಬೀಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments