Wednesday, February 11, 2026
Homeಕ್ರೈಮ್ಹುಡುಗಿ ಕೈ ಕೊಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ: ವಿಡಿಯೋ ಮಾಡಿ ಹೇಳಿದ್ದೇನು?

ಹುಡುಗಿ ಕೈ ಕೊಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ: ವಿಡಿಯೋ ಮಾಡಿ ಹೇಳಿದ್ದೇನು?

ಚಾಮರಾಜನಗರ: ಪ್ರೀತಿಸಿದ ಹುಡುಗಿ ಕೈ ಕೊಟ್ಟಿದ್ದಕ್ಕೆ ಮನನೊಂದು ನನ್ನ ಸಾವಿಗೆ ಆಕೆಯೇ ಕಾರಣ ಎಂದು ವೀಡಿಯೋ ಹರಿಬಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.

24 ವರ್ಷದ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು. ಸಂತೋಷ್ ಹಾಗೂ ಸಾಗಡೆ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆಕೆಯು ಬೇರೊಬ್ಬ ಯುವಕನಿಗೆ ಮೆಸೇಜ್ ಮಾಡಿದ್ದನ್ನು ಸಂತೋಷ್ ಪ್ರಶ್ನಿಸಿದ್ದ ಈ ಕಾರಣಕ್ಕೆ ಯುವತಿಯು ಸಂತೋಷ್‌ನಿಂದ ಅಂತರದಲ್ಲಿ ಇದ್ದಳು ಎಂಬ ಮಾಹಿತಿ ಇದೆ

ಹೀಗಾಗಿ ಮನನೊಂದ ಸಂತೋಷ್, ನನ್ನ ಸಾವಿಗೆ ಆಕೆಯೇ ಕಾರಣ. ಅವಳನ್ನು ಬಿಟ್ಟು ಇನ್ಯಾರು ಕಾರಣರಲ್ಲ ಎಂದು ಆತ್ಮಹತ್ಯೆಗೂ ಮುನ್ನ ವೀಡಿಯೋ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ತಮ್ಮಿಬ್ಬರ ಫೋಟೋ ಹಾಕಿದ್ದ. ಆ ನಂತರ ನೇಣು ಬಿಗಿದುಕೊಂಡು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದ.

ಈ ಘಟನಾ ಸಂಬಂಧ ತೆರಕಣಾಂಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಯುವಕನ ಆತ್ಮಹತ್ಯೆಗೆ ನಿಖರ ಕಾರಣ ಹುಡುಕುವಲ್ಲಿ ಪೊಲೀಸರು ನಿರತರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!