ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ, NR ಪುರ ತಾಲೂಕು, ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ ಹೋಬಳಿಗಳಿಗೆ ರಜೆ ನೀಡುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.