ಹಾಸನ: ಜಿಲ್ಲೆಯದ್ಯಂತ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಸಂಖ್ಯೆ ದಿನ ದಿನಕ್ಕೆ ಜಾಸ್ತಿಯಾಗುತ್ತಿದ್ದ ಬೆನ್ನಲ್ಲೇ ಇದೀಗ ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆ ಸಮೀಪದ ಚಿಕ್ಕನಾಯಕನಹಳ್ಳಿಯಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಹೌದು.. ಚಿಕ್ಕನಾಯಕನಹಳ್ಳಿಯ ಸಿ. ಬಿ ವಿರುಪಾಕ್ಷ (70) ಮೃತ ವ್ಯಕ್ತಿಯಾಗಿದ್ದಾರೆ.ಆರೋಗ್ಯವಾಗಿ ಇದ್ದ ವಿರೂಪಾಕ್ಷ ರವರು ಕಳೆದ ರಾತ್ರಿ 11:30 ರಲ್ಲಿ ದಿಡೀರ್ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಸಕಲೇಶಪುರ ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವುದರಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಇದರಿಂದ 40 ದಿನಗಳ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಘಾತದಿಂದ ಮತ ಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.