ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೂಡಿಗೆರೆ ತಾಲೂಕು ದುರ್ಗದಹಳ್ಳಿಯಲ್ಲಿ ನಡೆದಿದೆ.
ರಮೇಶ್ (52) ಕಾಡುಕೋಣ ದಾಳಿಯಿಂದ ಮೃತಪಟ್ಟಿದ್ದಾರೆ. ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಹಿಂಬದಿಯಿಂದ ಬಂದು ಕಾಡುಕೋಣ ದಾಳಿ ನಡೆಸಿದೆ. ಒಬ್ಬರೆ ಕೆಲಸ ಮಾಡುತ್ತಿದ್ದ ಪರಿಣಾಮ ಅವರು ಜೋರಾಗಿ ಚೀರಾಡಿಕೊಂಡಿದ್ದಾರೆ. ಅಕ್ಕ ಪಕ್ಕದ ಎಸ್ಟೇಟ್ ಕಾರ್ಮೀಕರು ಬಂದು ನೋಡುವಾಗ ತೀವ್ರ ರಕ್ತ ಸೃಆವದಿಂದ ಬಳಲುತ್ತಿದ್ದ ರಮೇಶ್, ತೋಟದಿಂದ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ
ಇತ್ತೀಚಿನ ದಿನಗಳಲ್ಲಿ ಮೂಡಿಗೆರೆ, ಕಳಸ ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಇದರಿಂದ ಇಲ್ಲಿನ ಸ್ಥಳೀಯರು ಭಯಭೀತರಾಗಿದ್ದು, ದೈನಂದಿನ ಕೃಷಿ ಹಾಗೂ ತೋಟದ ಕೆಲಸಕ್ಕೆ ತೆರಳಲು ಹೆದರುತ್ತಿದ್ದಾರೆ.
ಬಾಳೂರು ಠಾಣೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದ್ದಾರೆ.