Monday, August 4, 2025
!-- afp header code starts here -->
Homeಜಿಲ್ಲಾಸುದ್ದಿKoppa: ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಮಿತಾ ಸಾವು: ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ!

Koppa: ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಮಿತಾ ಸಾವು: ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ!

ಕೊಪ್ಪ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಕುಮಾರಿ ಶಮಿತಾ ಸಾವನ್ನಪ್ಪಿರೋದನ್ನ ಖಂಡಿಸಿ ಕೊಪ್ಪ ಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ, ಈ ಬಗ್ಗೆ ಪಬ್ಲಿಕ್‌ ಇಂಪ್ಯಾಕ್ಟ್‌ ನಿರಂತರವಾಗಿ ವರದಿ ಮಾಡುತ್ತಲೇ ಬಂದಿದೆ.

ಕೊಪ್ಪದ ಶಾಲೆಯಲ್ಲಿ ಶಮಿತಾ ನಿಗೂಢ ಸಾವು ಪ್ರಕರಣ ಸಂಬಂಧ ಸಿಡಿದೆದ್ದ ಶೃಂಗೇರಿ ಕ್ಷೇತ್ರದ ನಾಗರೀಕರು, ಬೃಹತ್ ಪ್ರತಿಭಟನೆ ಮಾಡ್ತಿದ್ದು ಸುರಿಯುವ ಮಳೆಯನ್ನೂ ಲೆಕ್ಕಿಸದೇ ನ್ಯಾಯಕ್ಕಾಗಿ ಹೋರಾಟ ಶಮಿತಾ ಸಾವಿನ ತನಿಖೆಯಾಗಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆಗೆ ಕರೆ ಕೊಟ್ಟಿತ್ತು.ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಹಾಸ್ಟೇಲ್‌ ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯೇ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ ಹಾಗೆ ಈ ಹಿಂದೆ 22023ರಲ್ಲಿ ಅಮೂಲ್ಯ ಎಂಬ ಹುಡುಗಿ ಈಗ ಶಮಿತಾ ವಿದ್ಯಾರ್ಥಿನಿಗಳು ಸಾವನ್ನಪ್ಪಿದ್ದು ಇದಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಈ ಹಿನ್ನೆಲೆಯಲ್ಲಿ ಅಲ್ಲಿನ ಮಕ್ಕಳ ಪೋಷಕರು ಹಾಗೂ ಸ್ಥಳೀಯರು ಇದಕ್ಕೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದು ಮಕ್ಕಳಿಗೆ ಸರಿಯಾದ ರಕ್ಷಣೆ ಇಲ್ವಾ ಎಂಬುದರ ಬಗ್ಗೆ ತೀವ್ರ ಚರ್ಚೆಯಾಗಿದೆ.

ಬಹಳ ಮುಖ್ಯವಾಗಿ ಈ ಶಾಲೆಯಲ್ಲಿ ಸಿಸಿಟಿವಿ ಅಳವಡಿಕೆ, ರಾತ್ರಿ ಹೊತ್ತು ವಾರ್ಡನ್‌ ಇಲ್ಲದಿರುವುದು, ಕೌನ್ಸಲಿಂಗ್‌, ಪೋಷಕರ ಜೊತೆಗಿನ ಸಭೆ ಈ ವ್ಯವಸ್ಥೆಗಳನ್ನ ಮಾಡಬೇಕು ಹಾಗೆ ಇಂಥ ಘಟನೆ ನಡೆಯುತ್ತಿದ್ದರು ಅಧಿಕಾರಿಗಳು ಯಾರೂ ಕೂಡ ಇತ್ತ ಗಮನ ಹರಿಸುತ್ತಿಲ್ಲ ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು , ಶಾಸಕರು ಈ ಕಡೆ ಗಮನ ಹರಿಸಬೇಕು, ಸಾವಿಗೆ ನಿಖರ ಕಾರಣ ತಿಳಿಸಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!