ಮೂಡಿಗೆರೆ: ತಾಲೂಕಿನ ಬೇಲೂರು ರಸ್ತೆಯಲ್ಲಿ ಮದ್ಯ ರಾತ್ರಿ ಎರಡು ಮಿನಿ ಲಾರಿಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ, ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಲಾರಿಗಳಲ್ಲಿ ಒಂದರ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, ತೀವ್ರ ಪೆಟ್ಟಿಗೆ ಒಳಗಾದ ಚಾಲಕರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದೆ. ಗಾಯಗೊಂಡ ಇಬ್ಬರೂ ಬಣಕಲ್ ಸಮೀಪದವರು ಎನ್ನಲಾಗಿದೆ.

ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಕಾರಣ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.