ಚಿಕ್ಕಮಗಳೂರು: ಕೊಪ್ಪದ ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿ ಶಮಿತಾ ಅನುಮಾನಾಸ್ಪದ ಸಾವು ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕಮಗಳೂರು ಜಿಲ್ಲಾ ವತಿಯಿಂದ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ.

ಜೂನ್ 28ರಂದು ಕೊಪ್ಪದ ಮುರಾರ್ಜಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತಿದ್ದ ವಿದ್ಯಾರ್ಥಿನಿ ಶಮಿತಾ ಆತ್ಮಹತ್ಯೆಗೆ ಶರಣಾಗಿದ್ದು ಆದರೆ ಇದರ ಸುತ್ತ ಹಲವಾರು ಅನುಮಾನಗಳಿದ್ದು ಹಾಗೆ ಆಡಳಿತ ಮಂಡಳಿಯು ಈ ವಿಷಯದಲ್ಲಿ ನಡೆದುಕೊಂಡ ರೀತಿ ಕೂಡ ಅನುಮಾನ ಹುಟ್ಟಿಸುವಂತಿತ್ತು.

ಹಾಗೆ ಶಮಿತಾ ನೇಣು ಬಿಗಿದ ಸ್ಥಿತಿಯಲ್ಲಿ ಸಾವನಪ್ಪಿದ ಅದೇ ಶೌಚಾಲಯದ ಅದೇ ರಾಡ್ ಗೆ 2023 ರಲ್ಲಿ ಅಮೂಲ್ಯ ಎಂಬ ವಿದ್ಯಾರ್ಥಿನಿಯು ನೇಣು ಬಿಗಿದ ಸ್ಥಿತಿಯಲ್ಲಿ ಸಾವನಪ್ಪಿದ್ದಳು. ಮತ್ತು ಆ ಮುರಾರ್ಜಿ ವಸತಿ ಶಾಲೆಯಲ್ಲಿ ಸರಿಯಾದ ರೀತಿಯಲ್ಲಿ ಮೂಲ ಸೌಕರ್ಯಗಳು ಇರುವುದಿಲ್ಲ.

ನಂತರ ವಿದ್ಯಾರ್ಥಿಗಳು ಹಿಂಸೆಯ ರೀತಿಯಲ್ಲಿ ಓದುವ ಪರಿಸ್ಥಿತಿ ಬಂದಿದೆ ಆದುದರಿಂದ ಈ ಪ್ರಕರಣದಲ್ಲಿ ಸೂಕ್ತ ತನಿಖೆಯಾಗಬೇಕು ಮತ್ತು ಆ ಮುರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಮೂಲಸೌಕರ್ಯಗಳು ಸಿಗಬೇಕು ಮತ್ತು ಅಮೂಲ್ಯ ಮತ್ತು ಶಮಿತ ಸಾವಿಗೆ ಸೂಕ್ತ ತನಿಖೆ ನಡೆದು ನ್ಯಾಯ ಸಿಗಬೇಕೆಂದು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕಮಗಳೂರು ಜಿಲ್ಲಾ ವತಿಯಿಂದ ಬೃಹತ್ ಪ್ರತಿಭಟನೆಗೆ ಕರೆ ಕೊಡಲಾಗಿದೆ.