ಕೊಪ್ಪ: ತಾಲೂಕಿನ ಅಗಳಗಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗಾರುಕೂಡಿಗೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹೌದು …ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಗಳೂರು ಮೂಲದ ಪ್ರವಾಸಿಗರು ಶೃಂಗೇರಿಯಿಂದ ಹೊರನಾಡಿಗೆ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಆಳಕ್ಕೆ ಬಿದ್ದಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ಹಿಂದೆ ಸುರಿದ ಮಳೆಗೆ ಹೆಗ್ಗಾರುಕೂಡಿಗೆಯಲ್ಲಿ ರಸ್ತೆ ಕುಸಿದಿದ್ದು ರಸ್ತೆಯ ತಡೆಗೋಡೆಯ ಕಾಮಗಾರಿ ಪ್ರಗತಿಯ ಹಂತದಲ್ಲಿದ್ರೂ ಸೂಚನಾ ಫಲಕ ಹಾಕದೆ ಇರುವ ಕಾರಣ. ಹಾಗಾಗಿ ಅಪಘಾತಕ್ಕೆ ಇದೇ ಕಾರಣವೆಂದು ಅಲ್ಲಿನ ಸ್ಥಳೀಯರು ದೂರಿದ್ದಾರೆ.