Thursday, July 30, 2026
Homeಜಿಲ್ಲಾಸುದ್ದಿಶಿವಮೊಗ್ಗ ಕೇಂದ್ರ ಕಾರಾಗೃಹ: ಕೈದಿ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ!

ಶಿವಮೊಗ್ಗ ಕೇಂದ್ರ ಕಾರಾಗೃಹ: ಕೈದಿ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ!

Telegram Group
Join Now

ಶಿವಮೊಗ್ಗ: ಜೈಲಿನಲ್ಲಿದ್ದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿದೆ. ಮೆಗ್ಗಾನ್‌ ಆಸ್ಪತ್ರೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಮೊಬೈಲ್‌ ಫೋನ್‌ ಹೊರಕ್ಕೆ ತೆಗೆದಿದ್ದಾರೆ.

ಕೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿತ್ತು.


ದೌಲತ್‌ ಅಲಿಯಾಸ್‌ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್‌ 24ರಂದು ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ. ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಿದ್ದರು.

ಆದರೆ ಎಕ್ಸರ ಮಾಡಿದಾಗಲೇ ಗೊತ್ತಾಗಿದ್ದು ಕೈದಿ ದೌಲತ್‌ನ ಹೊಟ್ಟೆಯಲ್ಲಿ ಹೊರಗಿನ ವಸ್ತು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್‌ ಫೋನ್‌ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.‌


ನಿಷೇಧವಿದ್ದರು ಜೈಲಿನೊಳಗೆ ಮೊಬೈಲ್‌ ಫೋನ್‌ ತಲುಪಿರುವ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments