Wednesday, March 18, 2026
Homebig breakingಹಾಸನದ ಚಿಕ್ಕತಿರುಪತಿ  ದೇವಸ್ಥಾನದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ಹಾಸನದ ಚಿಕ್ಕತಿರುಪತಿ  ದೇವಸ್ಥಾನದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ಹಾಸನ: ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥರಾದ ಘಟನೆ ಹಾಸನದ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ಹೌದು … ಹಾಸನದ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು. ಈ ದೇಗುಲ ಚಿಕ್ಕ ತಿರುಪತಿ ಇಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದರು.

ಭಾನುವಾರ ರಾತ್ರಿ 7.30ಕ್ಕೆ ಖಾಸಗಿ ಸಂಸ್ಥೆಯೊಂದರ ವತಿಯಿಂದ ಭಕ್ತರಿಗೆ ಮೊಸರನ್ನ ಹಾಗೂ ಬಿಸಿಬೇಳೆ ಬಾತ್ ಆಹಾರ ವಿತರಣೆ ಮಾಡಲಾಗಿತ್ತು. ಆದರೆ ಜಾತ್ರೆಯಲ್ಲಿ ಆಹಾರ ಸೇವಿಸಿದ ಸುಮಾರು 50ಕ್ಕೂ ಹೆಚ್ಚು ಭಕ್ತರಲ್ಲಿ ಸೋಮವಾರ ಮುಂಜಾನೆ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥರನ್ನು ಅರಸೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಭಕ್ತರಿಗೆ ನೀಡಿದ್ದ ಆಹಾರದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ. ತಕ್ಷಣವೇ ಚಿಕಿತ್ಸೆ ದೊರೆತಿದ್ದರಿಂದ ಅನೇಕ ಭಕ್ತರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!