ಶೃಂಗೇರಿ: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಗಾಳಿ ಮಳೆಗೆ ಅವಾಂತರಗಳು ಮುಂದುವರೆದಿದ್ದು ಇಂದು ಸುರಿದ ಗಾಳಿ ಸಹಿತ ಮಳೆಗೆ ಬೃಹತ್ ಮರ ರಸ್ತಗೆ ಅಡ್ಡಲಾಗಿ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿರುವ ಘಟನೆ ಶೃಂಗೇರಿ ತಾಲೂಕಿನ ಮೆಣಸೆ ಬಳಿಯ ಕಿಕ್ರೆ ಗ್ರಾಮದಲ್ಲಿ ನಡೆದಿದೆ.

ಬಾರಿ ಗಾತ್ರದ ಮರ ರಸ್ತೆಗೆ ಬಿದ್ದು ಪರಿಣಾಮ 4ಕ್ಕೂ ಹೆಚ್ಚು ಗ್ರಾಮಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ವಾಹನಗಳು ಸಂಚರಿಸುತ್ತಿದ್ದಾಗಲೇ ಮರ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆಯ ಬಳಿಕ ಅರಣ್ಯಾ ಇಲಾಖೆ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಮರ ತೆರವು ಕಾರ್ಯ ಆರಂಭಿಸಿದ್ದಾರೆ. ಈ ರಸ್ತೆ ಮೆಣಸೆ, ಕಿಕ್ರೆ ಸೇರಿದಂತೆ ಹಲವು ಗ್ರಾಮಸ್ಥರ ಸಂಚಾರದ ಮಾರ್ಗವಾಗಿದೆ. ಮರ ಬಿದ್ದ ಕಾರಣ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.