ಚಿಕ್ಕಮಗಳೂರು: ಚಲಿಸುತ್ತಿದ್ದ ರೈಲಿನ ಕೆಳಭಾಗ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ ಆದರೆ ಯಾವುದೇ ಅನಾಹುತ ಸಂಭವಿಸಿಲ್ಲ ತಕ್ಷಣ ಬೆಂಕಿ ಆರಿಸಲಾಗಿದೆ. ಈ ಘಟನೆ ತರಿಕೆರೆ ತಾಲೂಕಿನ ಅಜ್ಜಂಪುರ ಕ್ರಾಸ್ ಬಳಿ ನಡೆದಿದೆ.

ಹೌದು … ತಾಳಗುಪ್ಪ ಟು ಮೈಸೂರು ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ ತಕ್ಷಣ ರೈಲು ನಿಲ್ಲಿಸಿದ ಅಧಿಕಾರಿಗಳು, ಪರಿಶೀಲನೆ ನಡೆಸಿದ ಚಾಲಕ ಬೆಂಕಿ ತಗುಲಿದ ವ್ಯಾಕ್ಯೂ ಹಾಗೂ ನೀರನ್ನು ಬಳಸಿ ಬೆಂಕಿಯನ್ನು ನಂದಿಸಲಾಯಿತು. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲವೆಂದು ತಿಳಿಸಿದರು.
ಸ್ವಲ್ಪ ಹೊತ್ತು ಬಿಟ್ಟು ಮತ್ತೆ ಮೈಸೂರು ಕಡೆ ಹೊರಟ ರೈಲು ಸಣ್ಣದಾಗಿ ಕಾಣಿಸಿಕೊಂಡಿದ್ದ ಬೆಂಕಿ ಯಾವುದೇ ಅನಾಹುತ ಸಂಭವಿಸಿಲ್ಲ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.