ಚಿಕ್ಕಮಗಳೂರು: ರಾಮನಹಳ್ಳಿ ಬಡಾವಣೆಯ ಸರ್ವೆ ನಂಬರ್ 115/1 ರಲ್ಲಿ 2.13 ಗುಂಟೆ ಜಾಗದಲ್ಲಿ 15000 ಅಡಿ ಪಾರ್ಕ್ ಗಾಗಿ ಕಾಯ್ದಿರಿಸಿದ ಜಾಗವನ್ನು ಕೆಲ ಪ್ರಭಾವಿ ವ್ಯಕ್ತಿಗಳು ಅತಿಕ್ರಮಿಸಿದ್ದಾರೆ ಎಂದು ಆರೋಪಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಅಗ್ನಿ ಸುಮಂತ್ ಅವರ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷರಾದ ಶೀಲಾ ದಿನೇಶ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು!
ಅಗ್ನಿ ಸುಮಂತ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಕಾರ್ಯಕರ್ತರು ಸೇರಿಕೊಂಡು ನಗರಸಭೆ ಅಧ್ಯಕ್ಷರಾದ ಶೀಲಾ ದಿನೇಶ್ ಅವರಿಗೆ ಈ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಯಾವುದೇ ಪ್ರಭಾವಿಗಳ ಒತ್ತಡಕ್ಕೆ ಮಣಿಯದೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದರ ಜೊತೆಗೆ ಜಾಗವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ಈ ವೇಳೆ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಭಾರ್ಗವ್, ತಾಲೂಕು ಅಧ್ಯಕ್ಷರಾದ ಗೌತಮ್, ಹೋಟೆಲ್ ಘಟಕ ಜಿಲ್ಲಾಧ್ಯಕ್ಷರಾದ ತೇಜಸ್, ಜಿಲ್ಲಾ ಉಪಾಧ್ಯಕ್ಷರಾದ ಶಂಕರ್ ಶೆಟ್ಟಿ ಮತ್ತು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.