ಚಿಕ್ಕಮಗಳೂರು: ನಗರದಲ್ಲಿ ಬೀದಿನಾಯಿಗಳ ಹಾವಳಿ ಶುರುವಾಗಿದ್ದು ಹೌಸಿಂಗ್ ಬೋರ್ಡ್ ಪ್ರದೇಶ ಹಾಗೂ ಜಿಲ್ಲಾ ಪಂಚಾಯ್ತ್ ಬಳಿ ಒಂದೇ ದಿನ 11 ಜನರ ಮೇಲೆ ನಾಯಿಗಳು ದಾಳಿ ಮಾಡಿವೆ.ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಪ್ರದೇಶ ಹಾಗೂ ಜಿಲ್ದಲಾ ಪಂಚಾಯ್ತ್ ಬಳಿ ನಾಯಿಗಳ ಗುಂಪೊಂದು ಏಕಾಏಕಿ 11 ಜನರ ಮೇಳೆ ದಾಳಿ ಮಾಡಿದ್ದು ಅದರಲ್ಲಿ ಹಲವರು ನರ್ಸಿಂಗ್ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಹಾಗೆ 3 ವರ್ಷದ ಮಗುವೊಂದು ಗಂಭೀರವಾಗಿ ಗಾಯಗೊಂಡಿದ್ದು, ಕಾಲು, ಕೈ ಮತ್ತು ದೇಹದ ಇತರ ಭಾಗಗಳಲ್ಲಿ ತೀವ್ರ ಗಾಯಗಳಾಗಿವೆ.
ಗಾಯಗೊಂಡ ಎಲ್ಲರನ್ನು ತಕ್ಷಣವೇ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಮಗುವಿನ ಗಂಭೀರ ಸ್ಥಿತಿಯನ್ನು ಗಮನಿಸಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಿದ್ದಾರೆ. ಉಳಿದ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಯಿಗಳ ದಾಳಿಯಿಂದ ಸ್ಥಳೀಯರು ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.