ಬಾಳೆಹೊನ್ನೂರು: ಕಾಡಾನೆ ದಾಳಿಗೆ ಬಡ ಮಹಿಳೆ ಸಾವು ಪ್ರಕರಣ ಸಂಬಂಧ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ಶೃಂಗೇರಿ ಕ್ಷೇತ್ರ ಹಾಗೂ ಕ್ಷೇತ್ರದ ಎಲ್ಲಾ ರೈತ ಕಾರ್ಮಿಕ ಇತರೆ ಸಂಘಟನೆಗಳ, ಮತ್ತು ಎಲ್ಲಾ ನಾಗರಿಕರ ಸಹಯೋಗದೊಂದಿಗೆ ಬಾಳೆಹೊನ್ನೂರಿನಲ್ಲಿ ರಾಜ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಪ್ರತಿಭಟನೆಯಲ್ಲಿ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಜೀವರಾಜ್, ಜೆಡಿಎಸ್ ನಾಯಕ ಸುಧಾಕರ್ ಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು ಸಚಿವರು, ಶಾಸಕರು, ಅರಣ್ಯ ಇಲಾಖೆ, ಸರ್ಕಾರದ ವಿರುದ್ಧನೂ ಪ್ರತಿಭಟನಾಕಾರರು ಕಿಡಿ ಕಾರಿದರು. ಹಾಗೆ ಪ್ರತಿಭಟನೆಯಲ್ಲಿ ನೂರಾರು ಜನ ಗ್ರಾಮಸ್ಥರು ಭಾಗಿಯಾಗಿದ್ದು ಅಲ್ಲಿನ ಅರಣ್ಯಾಧಿಕಾರಿಗಳನ್ನ ತರಾಟೆ ತೆಗೆದುಕೊಂಡರು
ಬನ್ನೂರಿನಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆ ಅನಿತಾ (25) ಮೃತಪಟ್ಟಿದ್ರು