ಹಾಸನ : ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿಯ ಶಿರಾಡಿಘಾಟ್ ರಸ್ತೆ ಬಳಿ ಘಟನೆ ನಡೆದಿದ್ದು ಡಿಕ್ಕಿ ರಭಸಕ್ಕೆ ಒಂದು ಸಾರಿಗೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದ್ದು ಎಂಟು ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ KA-21-F-0120 ನಂಬರ್‌ನ ಸಾರಿಗೆ ಬಸ್ ಒಂದಾದರೆ ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ KA-13-F-2280 ನಂಬರ್‌ನ ಸಾರಿಗೆ ಬಸ್ ಇನ್ನೊಂದಾಗಿತ್ತು ಇವೆರಡು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು ಡಿಕ್ಕಿ ರಭಸಕ್ಕೆ ಒಂದು ಸಾರಿಗೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದ್ದು ಎರಡು ಬಸ್‌ನಲ್ಲಿದ್ದ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯಗಲಾಗಿದ್ದು ಅದರಲ್ಲಿ ಎಂಟು ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯವಾಘಿದ್ದುಓರ್ವ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಲಾಗುತ್ತಿದೆ
ಪ್ರಕರಣ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.