ಎನ್ ಆರ್ ಪುರ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಹಲವು ವರ್ಷಗಳಿಂದ ಇದ್ದರು ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಧಾನ ವ್ಯಕ್ತಪಡಿಸಿದ್ದಾರೆ
ಈ ಭಾಗದಲ್ಲಿ ಅರಣ್ಯ ಇಲಾಖೆ ನಿಜಕ್ಕೂ ನಿರ್ಲಕ್ಷ್ಯ ವಹಿಸುತ್ತಿದ್ದು ಕಾಡಾನೆಗಳ ಓಡಾಟ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದರೂ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳದೆ ಬಡ ಕೂಲಿ ಕಾರ್ಮಿಕರು ಜೀವ ಕಳೆದುಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ಸರ್ಕಾರ ಜನಪ್ರತಿನಿಧಿಗಳು ಪರಿಹಾರ ಕೊಟ್ಟು ಕೈ ತೊಳೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ. ಅರಣ್ಯ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸದೆ ಇದ್ದರೆ ನಾವು ಇದರ ವಿರುದ್ಧ ಗಂಭೀರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬನ್ನೂರು ಬೇಲೂರು ಬಾಳೆಹೊನ್ನೂರು ಸುತ್ತಾಮುತ್ತ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳದಿಂದ ಬೇಸತ್ತು ಜನ ಹೊರಗೆ ಬರಲು ಹೆದರುತ್ತಿದ್ದಾರೆ. ಹೇಗೆ ಯಾವಾಗ ಬಂದು ಅಟ್ಯಾಕ್ ಮಾಡುತ್ತೆ ಅಂತಾನೇ ಗೊತ್ತಾಗಲ್ಲ ಎಂದು ಸ್ಥಳಿಯರು ಭಯದಲ್ಲೇ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.