ಚಿಕ್ಕಮಗಳೂರು: ಆಧುನಿಕ ಯುಗದಲ್ಲಿ ಪೊಲೀಸರ ಪಾತ್ರವು ಬಹುಮುಖ್ಯವಾಗಿದೆ, ಕೇವಲ ಕಾನೂನು ಮತ್ತು ವ್ಯವಸ್ಥೆಯನ್ನು ಕಾಯ್ದುಕೊಳ್ಳುವುದು ಮಾತ್ರವಲ್ಲದೆ ಇಂದು ಅವರು ಸಮಾಜದಲ್ಲಿ ಶಾಂತಿ ಮತ್ತು ಭದ್ರತೆಯ ರೂವಾರಿಗಳಾಗಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಪೊಲೀಸ್ ಇಲಾಖೆಯು ಜನರೊಂದಿಗೆ ನಿಕಟ ಸಂಪರ್ಕ ಕಾಯ್ದುಕೊಳ್ಳುವ ಮೂಲಕ ಸಮುದಾಯದ ಪೊಲೀಸ್ ವ್ಯವಸ್ಥೆಗೆ ಆದ್ಯತೆ ನೀಡುತ್ತಿದೆ.
ಈ ನಿಟ್ಟಿನಲ್ಲಿ ಮನೆ ಮನೆಗೆ ಪೊಲೀಸ್ ಉಪಕ್ರಮವು ಸಮಾಜದಲ್ಲಿ ಅಪರಾಧ ತಡೆಗೆ ಸಹಕಾರಿ ಆಗುವುದಲ್ಲದೆ, ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ, ಸರ್ವರನ್ನು ಸಮಾನವಾಗಿ ಒಳಗೊಂಡು ಸಾರ್ವಜನಿಕರು ಈ ಕಾರ್ಯದಲ್ಲಿ ನೇರವಾಗಿ ಪಾಲ್ಗೊಳ್ಳುವಿಕೆಯನ್ನು ಖಾತರಿಪಡಿಸಿ, ಸಾಮಾಜಿಕ ಪಿಡುಗುಗಳ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ವ್ಯವಸ್ಥೆಯು ಒಂದು ಆಶಾಕಿರಣ, ಈ ಮೂಲಕ ಪೊಲೀಸರ ಬಗ್ಗೆ ಇರುವ ಭಯದ ಭಾವದ ಬದಲು ವಿಶ್ವಾಸದ ಚಿಹ್ನೆಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ತಿಳಿಸಿದರು.
ಪೊಲೀಸರು ಮತ್ತು ಸಾರ್ವಜನಿಕರ ನಡುವಿನ ನಂಬಿಕೆ ಮತ್ತು ಸಹಕಾರವನ್ನು ಹೆಚ್ಚಿಸಲು ಕರ್ನಾಟಕ ಪೊಲೀಸ್ ಇಲಾಖೆಯು ಇನ್ನೂತನ ಉಪಕ್ರಮವನ್ನ ಆರಂಭಿಸಿದೆ, ಸ್ಥಳೀಯ ಮಟ್ಟದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ನಾಗರೀಕರ ನಡುವೆ ನೇರ ಸಂವಹನವನ್ನು ಸ್ಥಾಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಜೈಕುಮಾರ್ ಉಪಸ್ಥಿತರಿದ್ದರು