ಮೂಡಿಗೆರೆ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡೆ ಸಾಕ್ಷಾರತ್ ಕ್ಲಬ್ ಮತ್ತು ಇಖೋ ಕ್ಲಬ್ ಉದ್ಘಾಟನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು..
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಮತಿ ಮಂಜುಳಾ ಮಾತನಾಡಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೂ ಹೆಚ್ಚಿನ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು..ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಶ್ರಮ ಅವಶ್ಯಕ,ಶ್ರದ್ದೆಯಿಂದ ಕಲಿತರೆ ಮಾತ್ರ ಉತ್ತಮ ಭವಿಷ್ಯ ನಿಮ್ಮದಾಗುತ್ತದೆ ಎಂದರು,
ಇದೆ ವೇಳೆ ಕಳೆದ ಶೈಕ್ಷಣಿಕ ವರ್ಷದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತಿರ್ಣಾರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಮನೋಜ್ ದಾರದಹಳ್ಳಿ,ಕೆಂಪೇಗೌಡ ಒಕ್ಕಲಿಗ ವೇದಿಕೆ ಅಧ್ಯಕ್ಷ ಬ್ರಿಜೇಶ್ ಕಡಿದಾಳ್,ವಕೀಲರಾದ ಸುಧೀರ್,ಬಕ್ಕಿ ಪ್ರಸಾದ್. ಸೇರಿದಂತೆ ಕಾಲೇಜು ಸಿಬ್ಬಂದಿ,ಪೋಷಕರು ವಿದ್ಯಾರ್ಥಿಗಳು ಇದ್ದರು
