ಕಳಸ: ಭದ್ರಾ ನದಿಗೆ ಪಿಕಪ್ ವಾಹನ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಐದು ದಿನಗಳ ಬಳಿಕ ಶಮಂತ್ ಮೃತದೇಹ ಪತ್ತೆಯಾಗಿದೆ.ಕಳೆದ ಶುಕ್ರವಾರ ಪಿಕಪ್ ವಾಹನ ಸಿಕ್ಕಿತ್ತು.
ಪಿಕಪ್ ವಾಹನದಲ್ಲಿ ಶಮಂತ್ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದು. ಗುರುವಾರ (ಜು.24) ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಭದ್ರಾ ನದಿಗೆ ಬಿದ್ದು ಸಾವನ್ನಪ್ಪಿದ್ದ. ಮಲೆನಾಡಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು.
ಕಳೆದ ಶುಕ್ರವಾರ ಪಿಕಪ್ ವಾಹನ ಸಿಕ್ಕಿದ್ದು, ಅದರಲ್ಲಿ ಶಮಂತ್ʼನ ಮೃತದೇಹ ಮಾತ್ರ ಪತ್ತೆಯಾಗಿರಲಿಲ್ಲ ಐದು ದಿಗಳ ಬಳಿಕ ಇಂದು ಶಮಂತ್ ಮೃತದೇಹ ಪತ್ತೆಯಾಗಿದೆ.
ಮಗ ಸಾವನ್ನಪ್ಪಿದ್ದಕ್ಕೆ ಮನನೊಂದು ಮಗನ ಮೃತದೇಹ ಸಿಗುವ ಮುನ್ನವೇ ತಾಯಿಯೂ ರವಿಕಲಾ(48 ) ಕೂಡ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ (ಜು.24) ಸಂಜೆ ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.