ಹಾಸನ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್‌ಎಐ) ಹಾಸನ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸ್ನೇಹಾ ನೇತೃತ್ವದಲ್ಲಿ ಹಾಸನ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್ ಹಾಗೂ ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳ ನೇತೃತ್ವದ ತಂಡ ದಾಳಿ ನಡೆಸಿದೆ.
ಹಾಸನ ನಗರದ ಚನ್ನಪಟ್ಟಣ ಹೌಸಿಂಗ್ ಬೋರ್ಡ್ನಲ್ಲಿರುವ ಜಯಣ್ಣ ನಿವಾಸ, ಪತ್ನಿ ನಿವಾಸ, ಹಾರ್ಡ್ವೇರ್ ಅಂಗಡಿ, ಇತರೆ ಎರಡು ಕಡೆಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗುತ್ತಿದೆ.
NHAI ಇಂಜಿನಿಯರ್ ಜಯಣ್ಣ ಮೊದಲ ಪತ್ನಿ ನಿವಾಸ, ಎರಡನೇ ಪತ್ನಿ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ. ಹಾಸನದ ಜಯನಗರದಲ್ಲಿರುವ ಮೊದಲ ಪತ್ನಿ ನಿವಾಸ, ಹಾಸನ ನಗರದ ಚನ್ನಪಟ್ಟಣ ಬಡಾವಣೆ ಹೌಸಿಂಗ್ ಬೋರ್ಡ್‌ನಲ್ಲಿರುವ ಎರಡನೇ ಪತ್ನಿ ನಿವಾಸ, ಎರಡನೇ ಪತ್ನಿಗೆ ಸೇರಿದ ಚನ್ನಪಟ್ಟಣ ಬಡಾವಣೆಯಲ್ಲಿರುವ ಹಾರ್ಡ್‌ವೇರ್ ಅಂಗಡಿ ಮೇಲೂ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಕೊಡಗು ಜಿಲ್ಲೆ, ಶನಿವಾರ ಸಂತೆಯಲ್ಲಿರುವ ಜಯಣ್ಣ ಅವರ ಫಾರಂ ಹೌಸ್ ಮೇಲೂ ದಾಳಿ ಮಾಡಲಾಗಿದ್ದು ಶನಿವಾರಸಂತೆಯಲ್ಲಿ ತೋಟ, ಫಾರಂಹೌಸ್ ಹೊಂದಿರುವ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ. ಹಾಸನದ ಆರ್‌ಸಿ ರಸ್ತೆಯಲ್ಲಿರುವ ಲೋಕೋಪಯೋಗಿ ಭವನದಲ್ಲಿರುವ ಜಯಣ್ಣ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಲಾಗಿದೆ.
ಒಟ್ಟು ಐದು ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಎಲ್ಲೆಡೆ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು