ಚಿಕ್ಕಮಗಳೂರು: ಮಲೆನಾಡಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು ಶೃಂಗೇರಿ, ಕಳಸ, ಮೂಡಿಗೆರೆ, ಕೊಪ್ಪ, NR ಪುರ ಭಾಗಗಳಲ್ಲಿ ಕೂಡ ಬಿರುಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗುತ್ತಿದೆ. ಕೆಲವೆಡೆ ಬಿರುಗಾಳಿ ಆರ್ಭಟಕ್ಕೆ ಬೃಹತ್ ಮರ ಉರುಳಿ ಬಿದ್ದಿದೆ ಹಾಗೆ ಮಳೆಯಿಂದಾಗಿ ಅನಾಹುತಗಳು ಕೂಡ ಸಂಭವಿಸಿವೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ NHP ಯಿಂದ ನಾರ್ವೆಗೆ ಸಂಪರ್ಕ ಕಲ್ಪಿಸುವ ಸೇತುವೆ ಇದೀಗ ಕುಸಿಯುವ ಹಂತಕ್ಕೆ ಬಂದು ತಲುಪಿದೆ.
ಭಾರೀ ಮಳೆಯಿಂದಾಗಿ ಸೇತುವೆಯ ಒಂದು ಬಾಗದಲ್ಲಿ ಧರೆ ಕುಸಿತವಾಗಿದ್ದು, ಇದರಿಂದ ಸೇತುವೆ ಕುಸಿಯುವ ಭೀತಿ ಎದುರಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸೇತುವೆಯ ಎರಡು ಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಿ ಓಡಾಟ ನಿರ್ಬಂಧಿಸಲಾಗಿದೆ.