ಬೆಂಗಳೂರು: ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲರ್ ರೇವಣ್ಣ ಕಣ್ಣೀರಿಟ್ಟರು. ಕಣ್ಣೀರು ಒರೆಸುತ್ತಲೇ ಪ್ರಜ್ವಲ್ ರೇವಣ್ಣ ಅಲ್ಲಿಂದ ತೆರಳಿದರು.
ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕೋರ್ಟ್ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್ ರೇವಣ್ಣ ಕಣ್ಣಿರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಟ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್ಡಿ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಈಗಾಗಲೇ ಜಾಮೀನು ದೊರೆತಿದೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು.