ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿರುವ ಘಟನೆ ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯ ಹುಣಸೆಹಳ್ಳಿಯಲ್ಲಿ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಕಾರಿನ ಒಂದು ಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದರು ಅದೃಷ್ಟವಶಾತ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಕ್ಷಣ ವಿದ್ಯುತ್ ಟ್ರಿಪ್ ಆಗಿದ್ದು ಕಾರಿನಲ್ಲಿದ್ವರು ಪ್ರಾನಾಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು ಈ ರಸ್ತೆ ಸಂಪೂರ್ಣ ಗುಂಡಿಮಯವಾಘಿದ್ದು ಇಲ್ಲಿ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ದಾಋಇಯಾಗಿದ್ದು ಆದರೂರಾಜ್ಯ ಸರ್ಕಾರ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ದಿನಕ್ಕೆ ಸಾವಿರಾರು ವಾಹನಗಳು ಕ್ಷೇತ್ರಕ್ಕೆ ಬರುತ್ತಲೇ ಇರುತ್ತವೆ ಆದಿದರಿಂದ ಇದರ ಬಗ್ಗೆ ಹೆಚ್ಚಿನ ಗಮನಕೊಡಬೇಕಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ.